ಬೆಂಗಳೂರು, ನ. 03 (DaijiworldNews/SM): ರಾಜ್ಯದಲ್ಲಿ ಶಾಲೆಗಳ ಪುನಾರಂಭದ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಿವೆ. ಈ ನಡುವೆ ಬಹುತೇಕರು ಸದ್ಯಕ್ಕೆ ಶಾಲೆಗಳು ಆರಂಭಿಸುವುದು ಬೇಡ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಚರ್ಚೆ ನಡೆಸುತ್ತಿದ್ದಾರೆ. ಸಂಪೂರ್ಣ ಅಭಿಪ್ರಾಯ ಸಂಗ್ರಹಿಸಿದ ಬಳಿಕ ನ. ೬ರಂದು ಅಂತಿಮ ನಿರ್ಧಾರ ಪ್ರಕಟಗೊಳ್ಳಲಿದೆ.
ಈಗಾಗಲೇ ದೀರ್ಘ ರಜೆಯ ಬಳಿಕ ಶಿಕ್ಷಕರು ಶಾಲೆಗಳಿಗೆ ಹಾಜರಾಗಿದ್ದಾರೆ. ಶಾಲೆಗಳ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. ಇದರೊಂದಿಗೆ ಶಾಲಾ ಕಟ್ಟಡ ಹಾಗೂ ಕೋಣೆಗಳ ದುರಸ್ತಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸಿದ್ಧತೆಗಳ ಬಗ್ಗೆಯೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಇನ್ನು ಈ ಹಿಂದೆ ಮನೆ ಮನೆಗೆ ತೆರಳಿ ಪಾಠ ಹೇಳಿ ಕೊಡುತ್ತಿದ್ದ ವಿಚಾರದ ಬಗ್ಗೆಯೂ ಚರ್ಚೆ ನಡೆಯಲಿದೆ. ಈ ಎಲ್ಲಾ ವಿಚಾರಗಳಾ ಅಭಿಪ್ರಾಯ ಸಂಗ್ರಹವಾದ ಬಳಿಕ ಸರಕಾರ ಮುಂದಿನ ನಿರ್ಧಾರ ಪ್ರಕಟಿಸಲಿದೆ.