ಮುಂಬೈ, ನ. 04 (DaijiworldNews/MB) : ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.
2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಂದು ಮುಂಜಾನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ತನೇ ದಾಳಿ ನಡೆಸಿದ್ದು ಬಂಧನಕ್ಕೆ ಯತ್ನ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ನಮ್ಮ ಮನೆಯವರಿಗೆ ಹಾಗೂ ನನಗೆ ಹಲ್ಲೆ ನಡೆಸಿದ್ದಾರೆ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.