ಬೆಂಗಳೂರು, ನ.05 (DaijiworldNews/PY): ಡಾರ್ಕ್ ನೆಟ್ ಜಾಲತಾಣಗಳ ಮೂಲಕ ಮಾದಕ ವಸ್ತುಗಳನ್ನು ಖರೀದಿ ಮಾಡಿ ನಗರಕ್ಕೆ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ಸುಜಯ್ ಎನ್ನಲಾಗಿದೆ.
ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದರು. ಈ ಜಾಲದಲ್ಲಿರುವ ಮತ್ತಷ್ಟು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಕಾರ್ಯಚರಣೆ ಕೈಗೊಂಡಿದ್ದಾರೆ.
ಸುಜಯ್ ವಿದೇಶದಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದು, ಬಿಟ್ ಕಾಯಿನ್ ಮೂಲಕ ಹಣ ಪಾವತಿಸುತ್ತಿದ್ದ. ವಿದೇಶದಿಂದ ತರಿಸಿಕೊಂಡಿದ್ದ ಡ್ರಗ್ಸ್ ಅನ್ನು ಖಾಸಗಿ ಕಂಪೆನಿಗಳ ಉದ್ಯೋಗಿಗಳಿಗೆ ಸೇರಿದಂತೆ ನಗರದ ಕೆಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ.
ಆರೋಪಿಯಿಂದ ಸುಮಾರು 500ಗ್ರಾಂ ಹೈಡ್ರೊ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.