ನವದೆಹಲಿ,ನ. 05 ( DaijiworldNews/HR): ಬಿಹಾರದ ಅಭಿವೃದ್ಧಿಗಾಗಿ ಎನ್ಡಿಎ ಸರ್ಕಾರ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಎನ್ಡಿಎ ಸರ್ಕಾರದಿಂದ ಮಾತ್ರ ಯುವಕರಿಗೆ ಉದ್ಯೋಗ, ರೈತರಿಗೆ ಅನುಕೂಲವಾಗಲಿದೆ ಮತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಕೃಷಿ ಯೋಜನೆಗಳು, ಮೂಲಸೌಕರ್ಯ, ಸಮಾಜ ಕಲ್ಯಾಣ ಸೇರಿದಂತೆ ಬಿಹಾರದ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ಸಾಕಷ್ಟು ಕೊಡುಗೆಗಳನ್ನು ನೀಡಿದೆ. ಬಿಹಾರವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದ ರಾಜ್ಯವಾಗಿದೆ ಮತ್ತು ಬಿಹಾರದ ಜನರು ಉತ್ತಮ ಆಡಳಿತಕ್ಕೆ ಆದ್ಯತೆ ನೀಡುತ್ತಾರೆ.
ಇನ್ನು ಬಿಹಾರಕ್ಕೆ ಅನೇಕ ಬಂಡವಾಳ ಹೂಡಿಕೆ ಹರಿದು ಬರುವಂತಹ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಅದರಿಂದ ಅನೇಕ ಯುವಕರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಮುದ್ರಾ ಯೋಜನೆ, ಸ್ಟ್ಯಾಂಡ್ ಅಪ್ ಯೋಜನೆ ಅಡಿ ಬಿಹಾರಕ್ಕೆ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಬಿಹಾರದಲ್ಲಿ ಈಗಾಗಲೇ ಎರಡು ಹಂತಗಳ ಮತದಾನ ಶಾಂತಿಯುತವಾಗಿ ನಡೆದಿದ್ದು, ಅಂತಿಮ ಹಂತದ ಮತದಾನ ಶನಿವಾರ ನಡೆಯಲಿದೆ.