ಬೆಂಗಳೂರು,ನ. 05 ( DaijiworldNews/HR): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಬೆಂಬಲಕ್ಕೆ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೀಶ್ ಗೌಡ ಪ್ರಕರಣವನ್ನು ಈಗಾಗಲೇ ಪೊಲೀಸರು ವಿಚಾರಣೆ ಮಾಡಿ ಮುಗಿಸಿದ್ದಾರೆ. ಆದರೆ ಮತ್ತೆ ಅದನ್ನು ಕೆದಕುವ ಪ್ರಯತ್ನವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ವಿನಯ್ ಕುಲಕರ್ಣಿಯವರು ಪ್ರಭಾವಿ ಎನ್ನುವ ಕಾರಣಕ್ಕೆ ಅವರನ್ನು ಮಟ್ಟಹಾಕುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಆದರೆ ಸಿಬಿಐ ಯಾರದೋ ಒತ್ತಡಕ್ಕೆ ಮಣಿಯುವುದಿಲ್ಲ. ಕಾನೂನಿನ ಪ್ರಕಾರವೇ ನಡೆದುಕೊಳ್ಳಲಿದೆ. ಸಿಬಿಐ ನವರು ಎಲ್ಲಾ ವಿಚಾರಣೆ ಮುಗಿಸಲಿ ಎಂದು ಹೇಳಿದ್ದಾರೆ.
ಇನ್ನ. ಸಿಬಿಐನವರು ರಾಜಕೀಯಕ್ಕೆ ತಲೆಬಾಗಬಾರದು ಅವರು ಕಾನೂನು ರೀತಿಯಲ್ಲಿಯೇ ತನಿಖೆ ನಡೆಸಬೇಕು. ಸಚಿವ ಜಾರ್ಜ್ ಅವರಿಗೆ ಎಷ್ಟು ಕಿರುಕುಳ ಕೊಟ್ಟಿದ್ದರು ಎಲ್ಲವೂ ಗೊತ್ತಿದೆ. ರಾಜಕಾರಣದಲ್ಲಿ ಚಕ್ರ ತಿರುಗುತ್ತಿರುತ್ತದೆ. ಸಿಬಿಐ ನವರು ರಾಜಕೀಯ ಅಸ್ತ್ರವಾಗಬಾರದು ಎಂದು ಹೇಳಿದ್ದಾರೆ.