ಮುಂಬೈ,ನ. 05 ( DaijiworldNews/HR): ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್ ಅವರು ರಿಪಬ್ಲಿಕ್ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಬಂಧನ ವಿರೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾಗಿದ್ದಾರೆ.
ರಾಜ್ಯಪಾಲರನ್ನು ಭೇಟಿಯಾಗಿ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇನ್ನು ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡ ವಶಕ್ಕೆ ಪಡೆದುಕೊಂಡಿದೆ.