ನವದೆಹಲಿ,ನ. 05 ( DaijiworldNews/HR): ಕೊರೊನಾ ಸೋಂಕು ರಾಷ್ಟ್ರ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ಕುರಿತು ದೆಹಲಿ ಹೈಕೋರ್ಟ್ ಅಸಮಾಧಾನ ಹೊರಹಾಕಿದ್ದು, ದೆಹಲಿ ಶೀಘ್ರದಲ್ಲೇ ಕೊರೊನಾ ರಾಜಧಾನಿ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ದೆಹಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ನ್ಯಾಯಮೂರ್ತಿ ಹಿಮಾ ಕೋಹ್ಲಿ ಮತ್ತು ಸುಬ್ರಹ್ಮಣಿಯಂ ಪ್ರಸಾದ್ ಅವರಿದ್ದ ಪೀಠವು ಹೇಳಿದೆ.
ಇನ್ನು ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಅದರ ಬಗ್ಗೆ ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ದೆಹಲಿ ಸರ್ಕಾರ ಪ್ರತಿಪಾದಿಸುತ್ತಿದೆ. ಆದರೆ ಕೊರೊನಾ ಪ್ರಕರಣಗಳು ನಿಯಂತ್ರಣ ಮೀರಿವೆ ಎಂಬುದಾಗಿ ಪೀಠವು ಹೇಳಿದೆ.