ಪುಲ್ವಾಮ,ನ. 06 (DaijiworldNews/HR): ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ಪಾಂಪೋರ್ನಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಉಗ್ರರು ಪಾಂಪೋರ್ನಲ್ಲಿ ಅಡಗಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿಸು ಬಂದಿದೆ.
ಇನ್ನು ಪಾಂಪೋರ್ನಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.