ವಿಜಯಪುರ,ನ. 06 (DaijiworldNews/HR): ಹಳೆಯ ದ್ವೇಷದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಮಹಾದೇವ ಸಾಹುಕಾರ ಭೈರಗೊಂಡ ಅವರ ಕಾರಿಗೆ ಟಿಪ್ಪರ್ನಿಂದ ಡಿಕ್ಕಿ ಹೊಡೆದು, ಬಳಿಕ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಟಿಪ್ಪರ್ ಚಾಲಕ ಉಮರಾಣಿ ನಾಗಪ್ಪ ಪೀರಗೊಂಡ(28) ಮತ್ತು ವಿಜಯಪುರದ ವಿಜಯ ತಾಳಿಕೋಟೆ(27) ಬಂಧಿತ ಆರೋಪಿಗಳಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಡಿವಾಳ ಹಿರೇಮಠ ಸ್ವಾಮಿ ಎಂಬ ವ್ಯಕ್ತಿಯು ರೌಡಿ ಗ್ಯಾಂಗ್ ಕಟ್ಟಿಕೊಳ್ಳಬೇಕು ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆರೇಳು ತಿಂಗಳಿಂದ ಗ್ಯಾಂಗ್ ಕಟ್ಟಿಕೊಂಡು ಈ ಸಂಚು ರೂಪಿಸುತ್ತಿದ್ದ ಎಂದು ತಿಳಿಸಿದ್ದಾರೆ.
ಇನ್ನು ಈ ಪ್ರಕರಣದ ಮುಖ್ಯ ಆರೋಪಿ ಮಡಿವಾಳ ಹಿರೇಮಠ ಸ್ವಾಮಿ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.