ಬೆಳಗಾವಿ,ನ. 06 (DaijiworldNews/HR): ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ನಡೆದ ದಿನದಿಂದಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಾಯ ಇದ್ದು, ಅದರಂತೆ ಈಗ ತನಿಖೆ ನಡೆದಿದೆ ಎಂದು ಹೇಳಿದ್ದಾರೆ.
ಇನ್ನು ಯೋಗೀಶಗೌಡ ಅವರ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಆದರೆ ವಿರೋಧ ಪಕ್ಷದವರು ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ, ಆದರೆ ಅವರ ಆರೋಪವು ಸುಳ್ಳಗಿದೆ ಎಂದು ಹೇಳಿದ್ದಾರೆ.