ನವದೆಹಲಿ,ನ. 06 (DaijiworldNews/HR): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತನ್ನ ಕೊನೆ ಚುನಾವಣೆ ಎಂದು ಹೇಳುವ ಮೂಲಕ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರದ ಜನತೆಗೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಅವರು ಅನುಕಂಪದ ಮೇಲೆ ಜನರಲ್ಲಿ ಮತ ಕೇಳುತ್ತಿದ್ದಾರೆ ಎಂದರು.
ಇನ್ನು ಚುನಾವಣೆಯಲ್ಲಿ ಆಯ್ಕೆಯಾದ ಮೊದಲ ದಿನದಿಂದ ಕುಂಟು ಬಾತುಕೋಳಿಯಾಗುವ ವ್ಯಕ್ತಿಗೆ ಬಿಹಾರ ಜನತೆ ಏಕೆ ಮತ ಹಾಕಬೇಕು ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.