ಬೆಂಗಳೂರು, ನ.06 (DaijiworldNews/PY): "ಕೊರೊನಾ ಹಿನ್ನೆಲೆ ಈ ಬಾರಿಯ ದೀಪಾವಳಿ ಸಂದರ್ಭ ಪಟಾಕಿ ಹೊಡೆಯುವುದನ್ನು ನಿಷೇಧ ಮಾಡಲಾಗಿದೆ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಮಾರಾಟ ಮಾಡುವಂತಿಲ್ಲ. ಅಲ್ಲದೇ, ಯಾರೂ ಕೂಡಾ ಪಟಾಕಿ ಹೊಡೆಯುವಂತಿಲ್ಲ" ಎಂದಿದ್ದಾರೆ.
"ಕೊರೊನಾ ಸೋಂಕು ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಈ ನಿರ್ಧಾರವನ್ನು ಶೀಘ್ರವೇ ರಾಜ್ಯ ಸರ್ಕಾರ ಹೊರಡಿಸಲಿದೆ" ಎಂದು ತಿಳಿಸಿದ್ದಾರೆ.