ತುಮಕೂರು, ನ. 06 (DaijiworldNews/MB) : ''ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಕಾರ್ಯಾನುಷ್ಠಾನದಲ್ಲಿ ಸಮುದಾಯದ ಪಾತ್ರ ಬಹುಮುಖ್ಯ'' ಎಂದು ಜೆಜೆಎಮ್ ಅನುಷ್ಠಾನ ಬೆಂಬಲ ಸಂಸ್ಥೆಯ ಐಇಸಿ ಸಂಯೋಜಕ ಮಹಾಂತೇಶ್ ಹಿರೇಮಠ್ ಹೇಳಿದರು.
ಜಿಲ್ಲಾ ಪಂಚಾಯತ್ ದ.ಕ, ಜಿಲ್ಲಾ ಗ್ರಾ.ಕು.ನೀರು ಮತ್ತು ನೈರ್ಮಲ್ಯ ಇಲಾಖೆ ಸಮುದಾಯ (ರಿ) ತುಮಕೂರು ಸಹಯೋಗದಲ್ಲಿ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಅಡಿಯ ಹೆಚ್.ಆರ್.ಡಿ/ಐಇಸಿ ಕಾರ್ಯಕ್ರಮದ ಅಂಗವಾಗಿ ಗುರುವಾರ ಪುತ್ತೂರು ತಾಲೂಕಿನ ನರಿಮೊಗರು ಗ್ರಾ.ಪಂಚಾಯತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆ ಅನುಷ್ಠಾನವು ಯಶಸ್ವಿಯಾಗಿ ನಡೆಯಲು ನಾವು ಸತತವಾಗಿ ಶ್ರಮಿಸುತ್ತೇವೆಂದು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರವಿಚಂದ್ರ.ಯು ಹೇಳಿದರು. ಸಭೆಯಲ್ಲಿ ತಾ.ಪಂ ಸದಸ್ಯ ಪರಮೇಶ್ವರ ಭಂಡಾರಿ, ನಿಕಟಪೂರ್ವ ಗ್ರಾ.ಪಂ ಸದಸ್ಯ, ಪಂ.ಕಾರ್ಯದರ್ಶಿ ಶೇಖ್ ಖಲಂದರ್ ಅಲಿ, ಜೆಜೆಎಮ್ ಐಇಸಿ ದಯಾನಂದ ಮಯ್ಯಾಳ, ಪಂ.ಸಿಬ್ಬಂದಿಗಳು, ಸ್ವಸಹಾಯ ಸಂಘ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಯೋಜನೆಯ ಮುಖ್ಯ ಉದ್ದೇಶ ಭಾರತದ ಗ್ರಾಮೀಣ ಭಾಗದ ಪ್ರತೀ ಮನೆಗಳಿಗೆನಲ್ಲಿ ಅಳವಡಿಸಿ 2024ರ ಒಳಗಾಗಿ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿದೆ.