ಬೆಳಗಾವಿ,ನ. 06 (DaijiworldNews/HR): ರಾಜ್ಯದ ಮುಖ್ಯಮಂತ್ರಿ ಸ್ಥಾನದ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆದಿಲ್ಲ, ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ , ಆದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಭ್ರಮೆಯಲ್ಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ತಪ್ಪು ಮಾಡಿಲ್ಲ ಎಂದಾದರೆ ಕಾನೂನು ರೀತಿಯಲ್ಲಿ ಹೋರಾಟ ಮಾಡಿ ಗೆದ್ದು ಬರಲಿ ಎಂದರು.
ಇನ್ನು ಮಾಜಿ ಶಾಸಕ ಅರವಿಂದ ಪಾಟೀಲ ಅವರನ್ನು ಸೂಕ್ತ ಸಮಯದಲ್ಲಿ ಬಿಜೆಪಿಗೆ ಸೇರಿಸಿಕೊಳ್ಳಲಾಗುವುದು ಎಂದು ನಾನು ಹೇಳಿದ್ದೆ, ಆದರೆ ಈ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ ಎಂದು ಹೇಳಿದ್ದಾರೆ.