ಜಮ್ಮು,ನ. 07 (DaijiworldNews/HR): ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ಮರಳಿ ಪಡೆಯುವವರೆಗೂ ನಾನು ಸಾಯುವುದಿಲ್ಲ ಎಂಬುದಾಗಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಈ ಕುರಿತು ಜಮ್ಮುವಿನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಫಾರೂಕ್ ಅಬ್ದುಲ್ಲಾ, ತಮ್ಮ ರಾಜ್ಯದ ಜನರಿಗೆ ಸಾಂವಿಧಾನಿಕ ಹಕ್ಕುಗಳನ್ನು ಮರಳಿ ಪಡೆಯುವವರೆಗೂ ನಾನು ಸಾಯುವುದಿಲ್ಲ. ಜನರಿಗೆ ಬೇಕಾಗಿ ನಾನು ಏನು ಮಾಡಲು ಸಿದ್ದ ಅದಕ್ಕಾಗಿ ಇನ್ನು ಬದುಕುಳಿದಿದ್ದೇನೆ. ನನ್ನ ಕೆಲಸವನ್ನು ಮುಗಿಸುವ ದಿನ ಈ ಜಗತ್ತನ್ನು ತೊರೆಯುತ್ತೇನೆ ಎಂದರು
ಇನ್ನು ರಾಷ್ಟ್ರೀಯ ಪಕ್ಷ ಬಿಜೆಪಿ ನಮ್ಮ ದೇಶದ ಹಾದಿ ತಪಿಸುತ್ತಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್ ನಲ್ಲಿ ಜನರಿಗೆ ಸುಳ್ಳು ಭರವಸೆಯನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.