ಬೆಳಗಾವಿ,ನ. 07 (DaijiworldNews/HR): ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿಯನ್ನು ಮೂರು ದಿನಗಳವರೆಗೆ ತಮ್ಮ ವಶಕ್ಕೆ ಪಡೆದುವಿಚಾರಣೆಗೆ ಒಳಪಡಿಸಲಿದ್ದಾರೆ.
ಇನ್ನು ನ್ಯಾಯಾಲಯದ ಆದೇಶ ಪ್ರತಿಯನ್ನು ಜೈಲಿನ ಅಧಿಕಾರಿಗಳಿಗೆ ಹಾಜರುಪಡಿಸಿದ ಬಳಿಕ ಸಿಬಿಐ ಅಧಿಕಾರಿಗಳು ಪ್ರಕ್ರಿಯೆ ಪೂರ್ಣಗೊಳಿಸಿ ವಿನಯ ಕುಲಕರ್ಣಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.