ಪಟ್ನಾ,ನ. 07 (DaijiworldNews/HR): ಇಂದು 78 ಕ್ಷೇತ್ರಗಳಿಗೆ ಬಿಹಾರ ವಿಧಾನಸಭೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಆರಂಭವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಎಲ್ಲ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆಯಲ್ಲಿ ಭಾಗವಹಿಸಬೇಕು. ಆ ಮೂಲಕ ಹೊಸ ಮತದಾನದ ದಾಖಲೆಯನ್ನು ಬರೆಯಬೇಕೆಂದು ವಿನಂತಿಸುತ್ತೇನೆ. ಜೊತೆಗೆ ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡಿಕೊಳ್ಳುವುದನ್ನು ಮರೆಯಬೇಡಿ' ಎಂದು ಟ್ವೀಟ್ ಮಾಡಿದ್ದರೆ.
ಇನ್ನು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಮಾತನಾಡಿ, ಬಿಹಾರ ಚುನಾವಣೆಯಲ್ಲಿ ತನ್ನ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಈಗಾಗಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ ದಣಿದಿದ್ದು, ಅವರಿಗೆ ರಾಜ್ಯವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಈ ಚುನಾವಣೆಯಲ್ಲಿ ನಮಗೆ ಉತ್ತಮ ಫಲಿತಾಂಶ ಸಿಗಲಿದೆ ಎಂದು ಹೇಳಿರುವ ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.