ಚಿಕ್ಕಮಗಳೂರು,ನ. 07 (DaijiworldNews/HR): ಕಾಫಿ ಡೇ ಮಾಲಿಕ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಪತ್ನಿ ಮಾಳವಿಕಾ ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದು, ಇಂದು ಕೋರ್ಟ್ ಗೆ ಹಾಜರಾದ ಮಾಳವಿಕ ಅವರಿಗೆ ಜಾಮೀನು ನೀಡಲಾಗಿದೆ.
ಕಾಫಿ ಬೆಳೆಗಾರರಿಗೆ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಕಾರಣ, ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿ, ಎಬಿಸಿ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದು, ಈ ಹಿನ್ನಲೆಯಲ್ಲಿ ನ್ಯಾಯಾಲಯವು ಮಾಳವಿಕಾ ಸೇರಿದಂತೆ 8 ಮಂದಿಗೆ ನೋಟಿಸ್ ನೀಡಿತ್ತು.
ನೋಟಿಸ್ ನೀಡಿದ ಬಳಿಕ ಮಾಳವಿಕ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಬಂಧನ ವಾರಂಟ್ ಹೊರಡಿಸಿದ್ದರು.
ಆದರೆ ಇದೀಗ ಮಾಳವಿಕಾ ಅವರು ಮೂಡಿಗೆರೆ ಜೆಎಂಎಫ್ಸಿ ಕೋರ್ಟ್ ಗೆ ಹಾಜರಾಗಿದ್ದು, ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.