ತಿರುವನಂತಪುರಂ,ನ. 07 (DaijiworldNews/HR): ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ತೊಂದರೆಯಿಲ್ಲ. ಕಳೆದ ವಾರ ನವದೆಹಲಿಯಲ್ಲಿ ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರಿಗೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ ಖಾನ್ ಹೇಳಿದ್ದಾರೆ.
ಇನ್ನು ಆರಿಫ್ ಮೊಹಮ್ಮದ್ ಖಾನ್ ಅವರು ನವದೆಹಲಿಯಲ್ಲಿದ್ದು ಬಳಿಕ ಶುಕ್ರವಾರ ಬೆಳಿಗ್ಗೆ ತಿರುವನಂತಪುರಂಗೆ ಮರಳಿದ್ದು, ಇಂದು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು ಎಂದು ರಾಜಭವನ ಮೂಲಗಳು ತಿಳಿಸಿವೆ.