ಆಂಧ್ರಪ್ರದೇಶ, ನ.07 (DaijiworldNews/PY): ಭಾರತದ ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಹಾಗೂ ವಿದೇಶದ 9 ಉಪಗ್ರಹಗಳನ್ನು ಒಳಗೊಂಡ ಪಿಎಸ್ಎಲ್ವಿ-ಸಿ 49 ರಾಕೆಟ್ ಶನಿವಾರ ಯಶಸ್ವಿಯಾಗಿ ಉಡಾವಣೆಯಾಗಿದೆ.
ಶನಿವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್ಎಲ್ವಿ-ಸಿ ಉಡಾವಣಾ ವಾಹನದಲ್ಲಿ ಇಒಎಸ್-01 ಹಾಗೂ ವಿದೇಶದ 9 ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ.
ಇಒಎಸ್-01 ಉಪಗ್ರಹವು ಭೂಮಿಯ ಸುತ್ತ ಸುತ್ತುವ ಉಪಗ್ರಹವಾಗಿದ್ದು, ಕೃಷಿ, ಅರಣ್ಯ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ಇಸ್ರೋ ಹೇಳಿದೆ.