ನವದೆಹಲಿ, ನ.07 (DaijiworldNews/PY): ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅನರ್ಬ್ ಗೋಸ್ವಾಮಿ ಅವರ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೊರ್ಟ್ ತೀರ್ಪು ಕಾಯ್ದಿರಿಸಿದೆ.
ಕೋರ್ಟ್ ಸೆಕ್ಷನ್ 439ರಡಿ ಅರ್ಜಿದಾರರು ಸೆಶನ್ಸ್ ಕೋರ್ಟ್ಗಳಲ್ಲಿ ಜಾಮೀನು ಕೋರಬಹುದಾಗಿದೆ. ಒಂದು ವೇಳೆ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದೇ ಆದಲ್ಲಿ ಈ ವಿಚಾರವಾಗಿ ನ್ಯಾಯಾಲಯವು ನಾಲ್ಕು ದಿನಗಳೊಳಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದೆ.