ಬೆಂಗಳೂರು, ನ.08 (DaijiworldNews/PY): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.
ಕನ್ನಡ ಹಾಗೂ ಸಂಸ್ಕೃತಿ, ಯುವಜನ ಹಾಗೂ ಕ್ರೀಡಾ ಖಾತೆ ಸಚಿವರಾಗಿದ್ದ ಸಿ.ಟಿ.ರವಿ ಅವರು ಇತ್ತೀಚೆಗಷ್ಟೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
ನ.7ರ ಶನಿವಾರದಂದು ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ಸಿಎಂ ಬಿಎಸ್ವೈ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಸಿ.ಟಿ.ರವಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.