ಬೆಂಗಳೂರು,ನ. 08 (DaijiworldNews/HR): ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದರೂ ಕೂಡ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ಭರವಸೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಅಂತೆಯೇ ಬಿಹಾರದಲ್ಲಿ ಲಾಲು ಮತ್ತು ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿದ್ದು, ನನಗೂ ಮಹಾಘಟಬಂಧನ ಗೆಲ್ಲುತ್ತದೆ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರವಾಗಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ, ಚಾರ್ಜ್ ಶೀಟ್ ಹಾಕಿದ ಮೇಲೆ ಕೇಸ್ ತೆರೆದಿದ್ದಾರೆ. ಪ್ರಕರಣ ಸಿಬಿಐಗೆ ವಹಿಸಿ ವಿನಯ್ ಕುಲಕರ್ಣಿ ಬಂಧಿಸುವಂತೆ ಮಾಡಿದ್ದಾರೆ ಎಂದರು.