ಚೆನ್ನೈ,ನ. 08 (DaijiworldNews/HR): ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು 2019ರಲ್ಲಿ ರಾಜೀನಾಮೆ ನೀಡಿದ್ದು, ಇದೀಗ ಸೋಮವಾರ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಅವರು, ನಾನು ರಾಜಕೀಯ ಸೇರಲು ನಿರ್ಧರಿಸಿದ್ದು, ಕಾಂಗ್ರೆಸ್ ಪಕ್ಷ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಸೆಂಥಿಲ್ ಅವರು ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಎಐಸಿಸಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್ ಅವರು ಸೆಂಥಿಲ್ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಆಯ್ಕೆ ಮಾಡಿಕೊಂಡಿದ್ದು ಯಾಕೆ ಎಂಬ ಬಗ್ಗೆ ಸೆಂಥಿಲ್ ಅವರು ಅಧಿಕೃತ ಪ್ರಕಟಣೆ ಹೊರಡಿಸಲಿದ್ದಾರೆ.