ಬೆಂಗಳೂರು,ನ. 08 (DaijiworldNews/HR): ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಅಶೋಕ್ ಕುಮಾರ್ ಅವರ ಮೃತದೇಹ ಪತ್ತೆಯಾಗಿದ್ದು, ಇದೀಗ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಅಶೋಕ್ ಕುಮಾರ್ ಅವರು ರ್ಮೈಕೊ ಲೇಔಟ್ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿಯ ಮನೆಯಲ್ಲಿವಾಸವಿದ್ದು, ಅವರ ಮನೆಯ ಕೊಠಡಿಯಲ್ಲಿ ಮೃತದೇಹ ಸಿಕ್ಕಿದ್ದು, ಕುಟುಂಬದವರ ಮಾಹಿತಿಯಂತೆ ಮನೆಗೆ ಹೋಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಗೊತ್ತಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.