ನವದೆಹಲಿ, ನ. 08 (DaijiworldNews/HR): ನೋಟು ರದ್ದತಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಈ ಹಿಂದೆ ನಡೆಸಿದ ಭ್ರಷ್ಟಾಚಾರ ಮತ್ತು ಕಪ್ಪು ಹಣದ ಮೇಲಿನ ದಾಳಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಭಾರತದಲ್ಲಿ ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು 500 ಮತ್ತು 1,000 ಮುಖಬೆಲೆ ನೋಟುಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದರು.
ಈ ಕುರಿತು ಮಾತನಾಡಿದ ರಾಜೀವ್ ಚಂದ್ರಶೇಖರ್, ನೋಟು ರದ್ದತಿಯಿಂದ ಆರ್ಥಿಕತೆಯನ್ನು ಸ್ವಚ್ಛಗೊಳಿಸಲಾಗಿದ್ದು, ಸಮಾಜದ ಎಲ್ಲಾ ವರ್ಗದವರಿಗೆ ಅಭೂತಪೂರ್ವ ಆರ್ಥಿಕ ಉತ್ತೇಜನಗಳನ್ನು ನೀಡಿದೆ. ಜೊತೆಗೆ, ಆದಾಯಗಳಿಕೆಗೆ ಅನುಕೂಲವಾಗಿದೆ' ಎಂದರು.
ಇನ್ನು 2004ರಿಂದ 2009 ಮತ್ತು 2009 ರಿಂದ 2014ರ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅತಿ ಹೆಚ್ಚು ಭ್ರಷ್ಟಾಚಾರ ಮತ್ತು ಕಪ್ಪು ಹಣ ಸಂಗ್ರಹಿಸಿತ್ತು ಎಂದು ಆರೋಪಿಸಿದ್ದಾರೆ.