ಚಂಡೀಗಢ,ನ. 08 (DaijiworldNews/HR): ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹರಿಯಾಣಾದಲ್ಲಿ ಪಟಾಕಿಗಳಿಗೆ ಸಂಬಂಧಿಸಿದಂತೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಪಟಾಕಿ ಸಿಡಿಸಲು ಬಯಸುವವರು ಎರಡು ಗಂಟೆ ಸಮಯವನ್ನು ನಿಗದಿ ಪಡಿಸಲಾಗುವುದು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಹರಿಯಾಣ ರಾಜ್ಯಾದ್ಯಂತ ಮಾಲಿನ್ಯದ ಜೊತೆಗೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳನ್ನು ಮಾರಾಟ ಮಾಡಲು ಮತ್ತು ಅವುಗಳನ್ನು ಸಿಡಿಸಲು ಬಯಸುವವರಿಗೆ ಎರಡು ಗಂಟೆ ಸಮಯವನ್ನು ನಿಗದಿ ಪಡಿಸಲಾಗುವುದು. ನಿಗದಿಪಡಿಸಿದ ಎರಡು ಗಂಟೆಗಳಲ್ಲಿ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ.
ಇನ್ನು ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.