ಧಾರವಾಡ, ನ.09 (DaijiworldNews/HR): ಜಿಲ್ಲಾಪಂಚಾಯತ್ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿನಯ್ ಕುಲಕರ್ಣಿ ಅವರ ವಿಚಾರಣೆ ನಡೆಸಿದ ನ್ಯಾಯಾಲಯ ನ.23ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ವಿನಯ್ ಕುಲಕರ್ಣಿ ನ.9 ರ ವರೆಗೂ ಸಿಬಿಐ ವಶಕ್ಕೆ ನೀಡಿದ್ದ ಇಲ್ಲಿನ 3ನೇ ಜಿಲ್ಲಾ ಸತ್ರ ನ್ಯಾಯಾಲಯವು
ಸೋಮವಾರ ಬೆಳಗ್ಗೆ 11.30 ಕ್ಕೆ 3ನೇ ಜಿಲ್ಲಾ ಸತ್ರ ನ್ಯಾಯಾಲಯ ವಿನಯ್ ಕುಲಕರ್ಣಿ ಖುದ್ದು ಹಾಜರಾಗಲು ಸೂಚಿಸಿತ್ತು. ಅದರಂತೆ ಅವರನ್ನು ಧಾರವಾಡದ ನ್ಯಾಯಾಲಯಕ್ಕೆ ಕರೆ ತರಲು ಸಿದ್ದತೆ ಕೂಡ ಮಾಡಲಾಗಿತ್ತು. ಆದರೆ ಅವರ ಬೆಂಬಲಿಗರು ಅಪಾರ ಪ್ರಮಾಣದಲ್ಲಿ ಸೇರುವ ಸಾಧ್ಯತೆ ಇರುವುದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ವಿಚಾರಣೆ ಮಾಡಲಾಯಿತು.