ಚೆನ್ನೈ, ನ.09 (DaijiworldNews/PY): ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಅವರು ನ.9ರ ಸೋಮವಾರ ಚೆನ್ನೈಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್, ಕಾಂಗ್ರೆಸ್ನ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಅಳಗಿರಿ, ಎಐಸಿಸಿ ಕಾರ್ಯದರ್ಶಿಗಳಾದ ಸಂಜಯ್ ದತ್ ಮತ್ತು ಸಿರಿವೆಲ್ಲಾ ಪ್ರಸಾದ್ ಅವರ ನೇತೃತ್ವದಲ್ಲಿ ತಮಿಳುನಾಡಿನ ಕಾಂಗ್ರೆಸ್ ಕೇಂದ್ರ ಕಚೇರಿ ಸತ್ಯಮೂರ್ತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್. ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ಗೆ ಸೇರಿದರು.
ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, 2009ರಲ್ಲಿ ನಾಗರಿಕ ಸೇವೆಗೆ ಆಯ್ಕೆಯಾಗಿದ್ದರು. ಸೆಂಥಿಲ್ ಅವರು 2019ರ ಸೆಪ್ಟೆಂಬರ್ನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.