ಬೆಂಗಳೂರು, ನ.10 (DaijiworldNews/HR): ಕೊರೊನಾ ನಿಯಂತ್ರಣ ಹಿನ್ನಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಉಲ್ಲಂಘನೆ ಮಾಡಿದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಒಟ್ಟು 9 ಮಂದಿಗೆ ನ.7ರಂದು ದಂಡ ವಿಧಿಸಲಾಗಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ.
ಕೊರೊನಾ ನಿಯಂತ್ರಣ ಮಾರ್ಗಸೂಚಿ ಪಾಲೀಸದೇ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ರ್ಯಾಲಿ ನಡೆಸಲು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ನಿನ್ನೆ ವಿಚಾರಣೆ ನಡೆಸಿದ್ದು, ಈ ಸಂಬಂಧ ವೈಯಾಲಿಕಾವಲ್ ಪೊಲೀಸರು ತೇಜಸ್ವಿ ಸೂರ್ಯ ಮತ್ತು ಇತರ ಎಂಟು ಮಂದಿಗೆ ನ.7ರಂದು ದಂಡ ವಿಧಿಸಿದ್ದಾರೆ ಎಂದು ಮಾಹಿತಿ ನೀಡಿತು.
ಇನ್ನು ಕೊರೊನಾ ನಿಯಂತ್ರಣ ಮಾರ್ಗಸೂಚಿಯನ್ನು ರಾಜರಾಜೇಶ್ವರಿ ನಗರ ಉಪಚುನಾವಣಾ ಪಚಾರದ ವೇಳೆ 684 ಉಲ್ಲಂಘಿಸಿದ್ದು ಅವರಿಗೂ ದಂಡ ವಿಧಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.