ಚೆನ್ನೈ,ನ.10 (DaijiworldNews/HR): ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಯ ವರದಿ ಮಾಡುತ್ತಾರೆ ಎಂಬ ಭೀತಿಯಿಂದ ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಇಸ್ರೇವೆಲ್ ಮೋಸೆಸ್(27) ಕೊಲೆಯಾದ ಪತ್ರಕರ್ತ ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಮೋಸಸ್ರನ್ನು ಕರೆ ಮಾಡಿ ಮನೆಯಿಂದ ಕರೆಸಿಕೊಂಡು ಬಳಿಕ ದುಷ್ಕರ್ಮಿಗಳು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.
ಕತ್ತು ಹಿಸುಕಿ ಕೊಲೆ ಮಾಡಿ ಆತನನ್ನು ರಸ್ತೆಯಲ್ಲಿ ಬಿಸಾಡಿ ಹೋದ್ದು, ಬಳಿಕ ಮನೆಯವರಿಗೆ ತಿಳಿದು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಈ ಕೊಲೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಐದು ಮಂದಿ ಶಂಕಿತರನ್ನು ಬಂಧಿಸಿದ್ದು, ಬಂಧಿತರು ಸ್ಥಳೀಯ ಕೆರೆಯ ಅಂಗಳದಲ್ಲಿ ರಾತ್ರಿ ವೇಳೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಇನ್ನು ಈ ಕುರಿತು ಮಾತನಾಡಿರುವ ಕೊಲೆಯಾದ ಪತ್ರಕರ್ತನ ತಂದೆ ಜ್ಞಾನರಾಜ್ ಅವರು, ತನ್ನ ಮಗ ತನಗೆ ಜೀವ ಬೆದರಿಕೆ ಇದೆ ಎಂದು ದೂರು ಕೊಟ್ಟಿದ್ದೆ, ಆದರೆ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.