ಶ್ರೀನಗರ, ನ.10 (DaijiworldNews/PY): ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆದಿದ್ದು, ಇಬ್ಬರು ಉಗ್ರರನ್ನು ಸದೆಬಡೆದಿದೆ.
ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಈ ವೇಳೆ ಜಮ್ಮು-ಕಾಶ್ಮೀರ ಪೊಲೀಸ್ ವಿಶೇಷ ಕಾರ್ಯಾಚರಣೆ ತಂಡ ಸೇರಿದಂತೆ ಸಿಆರ್ಪಿಎಫ್ ಹಾಗೂ ರಾಷ್ಟ್ರೀಯ ರೈಫಲ್ದ್ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು.
ಶೋಧ ಕಾರ್ಯಾಚರಣೆಯ ಸಂದರ್ಭ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿಯಾಗಿದ್ದು, ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಇಂಟರ್ನೆಟ್ ಸೇವೆಯನ್ನು ಸ್ಥಗಿತ ಮಾಡಲಾಗಿತ್ತು.
ಸೇನಾಪಡೆಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇಬ್ಬರು ಉಗ್ರರನ್ನು ಸದೆಬಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ. ಬೆಳಗ್ಗೆ 6 ಗಂಟೆಯ ಸುಮಾರಿಗೆ ಉಗ್ರ ಹಾಗೂ ಭದ್ರತಾ ಪಡೆಗಳ ಮೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.