ಲಖನೌ, ನ.10 (DaijiworldNews/HR): ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್(82) ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೋಪಾಲ್ ದಾಸ್ ಅವರಿಗೆ ಆಗಸ್ಟ್ ನಲ್ಲಿ ಕೊರೊನಾ ಸೋಂಕು ತಗುಲಿದ್ದು, ಬಳಿಕ ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಆದರೆ ಇದೀಗ ಕೊರೊನಾದಿಂದ ಗುಣಮುಖರಾದ ಬಳಿಕ ನೋವು ಕಾಣಿಸಿಕೊಂಡಿದೆ.