ನವದೆಹಲಿ,ನ.10 (DaijiworldNews/HR): ಮಣಿಪುರದ ಸಿಂಗಾಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಮೊದಲ ಜಯ ಲಭ್ಯವಾಗಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.
ಬಿಜೆಪಿ ಅಭ್ಯರ್ಥಿಯಾ ಜಿನ್ಸುವಾನ್ಹೌ ಐದು ಉಪಚುನಾವಣಾ ಕ್ಷೇತ್ರಗಳ ಪೈಕಿ ಸಿಂಗಾಟ್ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಗಿನ್ಸುವಾನ್ಹೌ ಅವರನ್ನು ಮಣಿಪುರದ ಸಿಂಗಾಟ್ನಿಂದ ಜಯಗಲಿಸಿದ್ದಾರೆಂದು ಘೋಷಿಸಲಾಗಿದ್ದರೆ, ವಾಂಗೋಯಿ ಕ್ಷೇತ್ರದಲ್ಲಿ ಓನಮ್ ಲುಖೋಯ್ ಸಿಂಗ್ ಅವರು 268 ಮತಗಳ ಅಂತರದಿಂದ ನ್ಯಾಶನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಅಭ್ಯರ್ಥಿ ಖುರೈಜಮ್ ಲೋಕನ್ ಸಿಂಗ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಕಾಂಗ್ರೆಸ್ನ ಮೊಯಿರಾಂಗ್ಥೆಮ್ ಹೇಮಂತ ಸಿಂಗ್ ಅವರು ವಾಂಗ್ಜಿಂಗ್ ಟೆಂಥಾ ಕ್ಷೇತ್ರದಲ್ಲಿ ಬಿಜೆಪಿಯ ಪಾವೊಮ್ ಬ್ರೋಜೆನ್ ಸಿಂಗ್ ವಿರುದ್ಧ 675 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.