ನವದೆಹಲಿ, ನ.10 (DaijiworldNews/PY): ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನಗೆ ಮಧ್ಯಂತರ ಜಾಮೀನು ನೀಡದ ಬಾಂಬೆ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಮಂಗಳವಾರ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ನಬ್ ಅವರಿಗೆ ಸೋಮವಾರ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿತ್ತು. ಅರ್ನಬ್ ಅವರು ಕ್ರಿಮಿನಲ್ ಕಾನೂನು ಪ್ರಕಾರ ಸೆಷನ್ಸ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನು ಸಲ್ಲಿಸಲು ಸ್ವತಂತ್ರರಿದ್ದಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.