ಪಾಟ್ನಾ, ನ.11 (DaijiworldNews/PY): "ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ವಂಚನೆ ನಡೆದಿದೆ" ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, "ಬಿಹಾರ ಚುನಾವಣೆಯಲ್ಲಿ ಇನ್ನೆಷ್ಟು ಫೋರ್ಜರಿ ನಡೆಯಲಿದೆ?. ಕಿಶನ್ಗಂಜ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,266 ಮತಗಳಿಂದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಮನೆಗೆ ಕಳುಹಿಸಲಾಗಿತ್ತು" ಎಂದಿದ್ದಾರೆ.
"ಸಕ್ರಾ ಹಾಗೂ ಕಿಶನ್ಗಂಜ್ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಕೊಲ್ಲುವ ಮೂಲಕ ಸಾರ್ವಜನಿಕರ ಅಭಿಪ್ರಾಯವನ್ನು ಅಪಹರಿಸಲಾಗಿದೆ" ಎಂದು ಆರೋಪಿಸಿದ್ದಾರೆ.
"ಸಕ್ರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 600 ಮತಗಳಿಂದ ಜಯಗಳಿಸಿದ್ದಾರೆ. ಆದರೆ, ಸುಮಾರು 1,700 ಮತಗಳಿಂದ ಅವರು ಸೋತಿದ್ದಾರೆ ಎಂದು ಘೋಷಿಸಲಾಗಿದೆ. ಇದು ಪ್ರಜಾಪ್ರಭುತ್ವದ ಪರೀಕ್ಷೆಯೇ? ಚುನಾವಣಾ ಆಯೋಗವು ಇದನ್ನು ಏಕೆ ಗಂಭೀರವಾಗಿ ಪರಿಗಣಿಸುತ್ತಿಲ್ಲ?" ಎಂದು ಕೇಳಿದ್ದಾರೆ.