ಬೆಂಗಳೂರು, ನ. 11 (DaijiworldNews/MB) : ಕರ್ನಾಟಕ ರಾಜ್ಯದ ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿದ್ದು ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕ್ಷೇತ್ರದ ಜನರಿಗೆ ಕನ್ನಡದಲ್ಲೇ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ'' ಎಂದು ಹೇಳಿದ್ದಾರೆ.
ಹಾಗೆಯೇ, ''ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು'' ಎಂದು ಟ್ವೀಟಿಸಿದ್ದಾರೆ.