ನವದೆಹಲಿ, ನ.12 (DaijiworldNews/HR): ಕೊರೊನಾ ಸೋಂಕಿಗೆ ತುತ್ತಾಗಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದುಇದೀಗ ಗುಣಮುಖರಾಗಿದ್ದಾರೆ.
ಈ ಕುರುತು ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಪರೀಕ್ಷೆ ನೆಗೆಟಿವ್ ಬಂದಿದ್ದು, ನನ್ನ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದು, ಶೀಘ್ರವೇ ಕರ್ತವ್ಯಕ್ಕೆ ಮರಳುವುದಾಗಿ ಹೇಳಿದ್ದಾರೆ.
ಸ್ಮೃತಿ ಇರಾನಿ ಅವರು ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅ.28ರಂದು ಕೊರೊನಾ ಪರೀಕ್ಷೆಗೊಳಪಟ್ಟಿದ್ದು ಅವರಿಗೆ ಪಾಸಿಟಿವ್ ಬಂದಿತ್ತು.