ನವದೆಹಲಿ, ನ. 12 (DaijiworldNews/MB) : ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ದೇಶದಲ್ಲಿ ಆರ್ಥಿಕ ಕುಸಿತ ಉಂಟಾಗಿದೆ ಎಂದು ಹೇಳಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರ್ಥಿಕ ಹಿಂಜರಿತ ವಿಚಾರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.
ದೇಶದ ಜಿಡಿಪಿ ಶೇಕಡಾ 8.6ರಷ್ಟು ಕುಸಿದಿದ್ದು ದೇಶದ ಇತಿಹಾಸದಲ್ಲಿಯೇ ಇಷ್ಟೊಂದು ಪ್ರಮಾಣದಲ್ಲಿ ಕುಸಿತ ಉಂಟಾಗಿರುವುದು ಮೊದಲ ಬಾರಿಗೆ ಎಂಬ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿರುವ ವರದಿಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
''ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ದೇಶದಲ್ಲಿ ಆರ್ಥಿಕ ಹಿಂಜರಿತ ಉಂಟಾಗಿದೆ. ಮೋದಿಯವರ ಕ್ರಮಗಳು ಭಾರತವನ್ನು ದುರ್ಬಲಗೊಳಿಸಿದೆ'' ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.