ಬೆಂಗಳೂರು,ನ.12 (DaijiworldNews/HR): ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವನೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಸೋಲಲು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪು ಇದ್ದು ಇದೀಗ ಮನೆಯೊಂದು ಎರಡು ಬಾಗಿಲು ಆಗಿದೆ. ಇನ್ನು ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಸೋಲಬೇಕೆಂದು ಸಿದ್ದರಾಮಯ್ಯ ಬಯಸುತಿದ್ದರು, ಇತ್ತ ಶಿರಾದಲ್ಲಿ ಕಾಂಗ್ರೆಸ್ ಸೋಲಲು ಡಿ ಕೆ ಶಿವಕುಮಾರ್ ಬಯಸುತ್ತಿದ್ದರು. ಅವರಿಬ್ಬರ ಒಳಜಗಳದಲ್ಲಿ ಬಿಜೆಪಿಗೆ ಗೆಲುವಾಗಿದೆ ಎಂದರು.
ಇನ್ನು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ದ್ವಂಸ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪು ಇದೆ. ಅದರಲ್ಲಿ ಸಿದ್ದರಾಮಯ್ಯ ಅವರ ಜೊತೆ ಅಖಂಡ ಶ್ರೀನಿವಾಸ್ ಮೂರ್ತಿ ಇದ್ದಾರೆ. ಇನ್ನೊಂದು ಕಡೆ ಡಿ.ಕೆ ಶಿವಕುಮಾರ್ ಅವರೊಂದಿಗೆ ಮನೆ ದ್ವಂಸ ಪ್ರಕರಣದ ಆರೋಪಿ ಸಂಪತ್ ರಾಜ್ ಇದ್ದಾರೆ. ಹೀಗಾಗಿ ಅಖಂಡ ಶ್ರೀನಿವಾಸ್ ಮೂರ್ತಿ ಗೆ ರಕ್ಷಣೆ ಕೊಡುತ್ತಿಲ್ಲ. ಹಾಗಾಗಿ ಅವರಿಗೆ ಸರ್ಕಾರದಿಂದ ಎಲ್ಲ ಸಹಕಾರ ಸಿಗಲಿದೆ ಎಂದು ಹೇಳಿದ್ದಾರೆ.