ಧಾರವಾಡ, ನ.12 (DaijiworldNews/HR): ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ನವಂಬರ್ 18ಕ್ಕೆ ಮುಂದೂಡಲಾಗಿದೆ.
ವಿನಯ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು, ಸಿಬಿಐ ತಕರಾರು ಸಲ್ಲಿಸಲು ಅವಕಾಶ ನೀಡಿ, ಬಳಿಕ ಇದೇ ಜಾಮೀನು ಅರ್ಜಿ ವಿಚಾರಣೆಯನ್ನು ನ.18ಕ್ಕೆ ಮುಂದೂಡಿತು.
ಇನ್ನು ವಿನಯ್ ಕುಲಕರ್ಣಿ ಅವರು ಈಗಾಗಲೇ ಬಂಧನಕ್ಕೆ ಒಳಗಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.