ಕೋಲ್ಕತಾ,ನ.12 (DaijiworldNews/HR): ಪಾಸ್ಚಿಮ್ ಬರ್ಧಮನ್ ಜಿಲ್ಲೆಯ ಅಂಡಾಲ್ನಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತ ಧರ್ಮವೀರ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಧರ್ಮವೀರ್ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಇನ್ನು ಈ ಘಟನೆ ಹಿಂದೆ ರಾಜಕೀಯ ಕೈವಾಡವಿದೆ ಎಂಬುದನ್ನು ಸ್ಥಳೀಯ ಟಿಎಂಸಿ ನಾಯಕರು ಆರೋಪಿಸುತ್ತಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಇದು ಆಗಿರಬಹುದು ಎಂದಿದ್ದಾರೆ.
ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.