ಬೆಂಗಳೂರು, ನ. 13 (DaijiworldNews/MB) : ''ಹೊಸವರ್ಷಾಚರಣೆ ಪಾರ್ಟಿಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಈ ವರ್ಷ ಕೊರೊನಾ ಕಾರಣದಿಂದಾಗಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಹಾಗೂ ಅಗ್ನಿ ದುರಂತಗಳನ್ನು ತಡೆಗಟ್ಟುವ ಸಲುವಾಗಿ ಜನರಿಗೆ ಜಾಗೃತಿ ಮೂಡಿಸಲು ಅಗ್ನಿ ಶಾಮಕ ಇಲಾಖೆಯ ಜಾಗೃತಿ ಜಾಥಾಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಪರಿಸರಕ್ಕೆ ಹಾಗೂ ಆರೋಗ್ಯಕ್ಕೆ ಹಾನಿಕರವಾದ ಪಟಾಕಿಗಳನ್ನು ಬಳಸದೆ ಹಸಿರು ಪಟಾಕಿಗಳನ್ನು ಮಾತ್ರ ದೀಪಾವಳಿಗೆ ಬಳಸಬೇಕು ಎಂದು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥಾ ನಡೆಸಲಾಗಿದೆ'' ಎಂದರು.
''ಹಾಗೆಯೇ ವರ್ಷಾಚರಣೆ ಮಾಡುವುದು ಅಗತ್ಯವೇ ಎಂಬ ಪ್ರಶ್ನೆಯೂ ಇದೆ. ಈವರೆಗೂ ಸರ್ಕಾರ ಈ ಸಂಭ್ರಮಾಚರಣೆ ನಿಷೇಧಿಸುವ ಯಾವು ನಿರ್ಧಾರವನ್ನೂ ಕೈಗೊಂಡಿಲ್ಲ. ಆದರೆ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುವುದು'' ಎಂದು ತಿಳಿಸಿದರು.