ಬಳ್ಳಾರಿ, ನ.13 (DaijiworldNews/PY): ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಈ ಹಿಂದೆ ಇದ್ದ ಆಯುಕ್ತೆ ಎಂ.ವಿ.ತುಷಾರಮಣಿ ಅವರನ್ನು ಭ್ರಷ್ಟಾಚಾರದ ಆರೋಪದ ಕಾರಣದಿಂದ ಅಮಾನತು ಮಾಡಲಾಗಿತ್ತು. ಇದೇಗ ಆ ಸ್ಥಾನಕ್ಕೆ 2016ನೇ ಬ್ಯಾಚ್ನ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನನ್ನು ಸರ್ಕಾರ ನಿಯೋಜಿಸಿದೆ.
ಈ ಮೊದಲು ಪ್ರೀತಿ ಗೆಹ್ಲೋಟ್ ಅವರು ಕಲಬುರ್ಗಿಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು.