ನವದೆಹಲಿ, ನ.13 (DaijiworldNews/HR): ಗುಜರಾತ್ ಮತ್ತು ರಾಜಸ್ಥಾನದಲ್ಲಿ ಭವಿಷ್ಯಕ್ಕೆ ಪೂರಕವಾಗುವ ಆಯುರ್ವೇದ ಇನ್ಸ್ ಟ್ಯೂಷನ್ಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಜಾಮ್ ನಗರದಲ್ಲಿ ಇನ್ಸ್ ಟಿಟ್ಯೂಟ್ ಆಫ್ ಟೀಚಿಂಗ್ ಆಯಂಡ್ ರಿಸರ್ಚ್ ಇನ್ ಆಯುರ್ವೇದ ಹಾಗೂ ರಾಜಸ್ಥಾನದ ಜೈಪುರದಲ್ಲಿ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಆಯುರ್ವೇದ ಕೇಂದ್ರಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.
ಇನ್ನು 2016ರಿಂದ ಧನ್ವಂತರಿ ಜಯಂತಿಯನ್ನು ಆಯುರ್ವೇದ ದಿನವನ್ನಾಗಿ ಆಚರಿಸಲು ಆರಂಭಿಸಿದ್ದು, ಇದೀಗ 2020ರಲ್ಲಿ ನವೆಂಬರ್ 13ರಂದು ಆಯುರ್ವೇದ ದಿನ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎರಡು ಆಯುರ್ವೇದ ಸಂಸ್ಥೆಗಳನ್ನು ಲೋಕಾರ್ಪಣೆ ಮಾಡುತ್ತಿರುವುದಾಗಿ ತಿಳಿದು ಬಂದಿದೆ.