ಕಲಬುರ್ಗಿ,ನ.13 (DaijiworldNews/HR): ನಗರದ ಎಂ.ಬಿ. ನಗರದ ಮನೆಯೊಂದರಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸೊಲ್ಲಾಪುರದ ಸಿಸಿಬಿ ಪೊಲೀಸರು ಪಡೆದಿದ್ದು, ಇದೀಗ ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಮತ್ತಿಮೂಡ ಹೆಸರಿನಲ್ಲಿರುವ ಇನ್ನೋವಾ ಕ್ರಿಸ್ಟಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಅತುಲ್ ಸಿರಶೆಟ್ಟಿ, ಪ್ರದೀಪ್ ಮಲ್ಲಯ್ಯ ಕಾರಂಜೆ ಎಂಬುವರಿಂದ 38.44 ಲಕ್ಷ ನಗದು, ನಾಲ್ಕು ಲ್ಯಾಪ್ಟಾಪ್ಗಳು, ಟಿ.ವಿಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಎರಡು ಕಾರು ಹಾಗೂ ಒಂದು ಸ್ಕೂಟರ್ ಜಪ್ತಿ ಮಾಡಿದ್ದಾರೆ.
ಇನ್ನು ಕೆಎ 51, ಎಂ.ಪಿ. 9955 ನೋಂದಣಿಯ ಕಾರು ಶಾಸಕರ ಪತ್ನಿಯ ಹೆಸರಿನಲ್ಲಿದ್ದು ಅದನ್ನು ವಶಪಡಿಸಿಕೊಂಡಿದ್ದಾರೆ.