ರಾಯಚೂರು, ನ.13 (DaijiworldNews/PY): "ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಗೆಲುವು ಖಚಿತ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಈ ಮೊದಲು ಮಸ್ಕಿ ಕ್ಷೇತ್ರ ಬಿಜೆಪಿಯ ವಶದಲ್ಲಿತ್ತು. ಈ ಬಾರಿಯೂ ಕೂಡಾ ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ" ಎಂದಿದ್ದಾರೆ.
"ಈಗಾಗಲೇ ಮಸ್ಕಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆದಿವೆ. ಮುಂದೆಯೂ ಕೂಡಾ ಹೆಚ್ಚಿನ ಅಭಿವೃದ್ದಿ ಮಾಡಲಾಗುವುದು" ಎಂದು ತಿಳಿಸಿದ್ದಾರೆ.