ರಾಮನಗರ, ನ.13 (DaijiworldNews/PY): "ಪಕ್ಷವನ್ನು 2023ರ ಸಾರ್ವತ್ರಿಕ ಚುನಾವಣೆಯ ಸಂದರ್ಭ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ" ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "2023ರ ಸಾರ್ವತ್ರಿಕ ಚುನಾವಣೆಯ ಸಂದರ್ಭ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಉದ್ದೇಶ. ರಾಜ್ಯದಾದ್ಯಂತ ಪ್ರಮಾಸ ಮಾಡಿ ಯುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತೇನೆ" ಎಂದಿದ್ದಾರೆ.
"ಯುವಕರಿಗೆ ಮುಂದೆ ಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು. 2023ರ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ರಾಮನಗರದಿಂದ ನಾನು ಸ್ಪರ್ಧಿಸುವುದಿಲ್ಲ. ಆದರೆ, ಈ ವಿಚಾರವಾಗಿ ಈ ಗಲೇ ಏನು ಹೇಳಲು ಸಾಧ್ಯವಿಲ್ಲ" ಎಂದು ತಿಳಿಸಿದ್ದಾರೆ.
"ಪಕ್ಷಕ್ಕೆ ಶಿರಾ ಉಪಚುನಾವಣೆಯಲ್ಲಿ ಸೋಲಾಗಿರುವುದು ಬೇಸರವಾಗಿದೆ. ಆದರೆ, ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆಯ ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಸೋಲಿನ ವಿಚಾರವಾಗಿ ಆತ್ಮಾವಲೋಕನ ನಡೆಯುತ್ತಿದೆ" ಎಂದಿದ್ದಾರೆ.