ನವದೆಹಲಿ,ನ.13 (DaijiworldNews/HR): ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ 7 ರಿಂದ 10 ದಿನಗಳಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಅದನ್ನು ನಿಯಂತ್ರಿಸುವುದಕ್ಕಗಿ ನಾವು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಮುಂದಿನ 7 ರಿಂದ 10 ದಿನಗಳಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರುವ ನಿರೀಕ್ಷೆಯಿದೆ" ಎಂದರು.
ಇನ್ನು ವಾಯು ಮಾಲಿನ್ಯದಿಂದಾಗಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವ ಸಾಧ್ಯತೆ ಇದ್ದು ಇದೆಲ್ಲವೂ ಮುಂದಿನ ದಿನಗಳಲ್ಲಿ ಹತೋಟಿಗೆ ಬರಲಿದೆ ಎಂದಿದ್ದಾರೆ. ದೆಹಲಿಯಲ್ಲಿ ಇಲ್ಲಿಯವರೆಗೆ ಸೋಂಕಿನ ಪ್ರಮಾಣ 4.67 ಲಕ್ಷಕ್ಕೆ ತಲುಪಿದೆ.