ಪಾಟ್ನಾ, ನ.14 (DaijiworldNews/PY): ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಪಾಲ ಫಗು ಚೌಹಾಣ್ ಅವರನ್ನು ಭೇಟಿಯಾಗಿದ್ದು, ರಾಜೀನಾಮೆ ಸಲ್ಲಿಸಿದ್ದಾರೆ.
ಈ ವೇಳೆ ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದಾರೆ.
ನಿತೀಶ್ ಕುಮಾರ್ ಅವರಿಂದ ರಾಜೀನಾಮೆ ಸ್ವೀಕರಿಸಿದ ರಾಜ್ಯಪಾಲ ಫಗು ಚೌಹಾಣ್ ಅವರು, "ಬಿಹಾರದಲ್ಲಿ ಎನ್ಡಿಎಯ ಹೊಸ ಸರ್ಕಾರ ರಚನೆಯಾಗುವ ತನಕ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ" ತಿಳಿಸಿದ್ದಾರೆ.